Popular Posts

ಕಂಟೆಂಟ್ ಮೂಲಕವೇ ಜನಮನ ಗೆದ್ದ “X & Y”

“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ಅವರು ಸತ್ಯ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸಿರುವ X&Y ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗಿ ಜನಮನ ಸೂರೆಗೊಳ್ಳುತ್ತಿದೆ.

ಯಶಸ್ವಿ ಚಿತ್ರಗಳಾದ “ರಾಮಾ ರಾಮಾ ರೇ “, “ಒಂದಲ್ಲಾ ಎರಡಲ್ಲಾ” ಮತ್ತು “ಮ್ಯಾನ್ ಆಫ್ ದಿ ಮ್ಯಾಚ್ ” ನಿರ್ದೇಶಕ ಡಿ ಸತ್ಯಪ್ರಕಾಶ್ ಅವರ ನಾಲ್ಕನೇ ಚಿತ್ರವಿದು.‌ಈಗಾಗಲೇ ಪೋಸ್ಟರ್, ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರನ್ನು ತಲುಪಿರುವ “X&Y” ಈ ವಾರ ತೆರೆಗೆ ಬಂದಿದ್ದು, ತನ್ನ ವಿಭಿನ್ನ, ವಿನೂತನ‌ ಕಂಟೆಂಟ್ ಮೂಲಕ ಪ್ರೇಕ್ಷಕರ ಮನ ಗೆಲ್ಲುತ್ತಿದೆ.‌

ನಿರ್ದೇಶಕರೆ ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದು, ಲವಿತ್ ಅವರ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು ಅವರ ಸಂಕಲನ, ಕೌಶಿಕ್ ಹರ್ಷ ಅವರ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನ‌ ಈ ಚಿತ್ರಕ್ಕಿದೆ. ಸತ್ಯ ಪಿಕ್ಚರ್ಸ್ ನಿರ್ಮಾಣದ “X&Y” ಚಿತ್ರದ ತಾರಾಬಳಗದಲ್ಲಿ ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ , ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರಿದ್ದಾರೆ.

Leave a Reply

Your email address will not be published. Required fields are marked *