1
1
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಹಚ್ಚೆ ಚಿತ್ರದ ಟ್ರೈಲರ್ ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಿದೆ. ಅಶ್ವ ಫಿಲಂಸ್ ಲಾಂಛನದಲ್ಲಿ ಯಶೋಧರ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ, ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಹಚ್ಚೆ” ಚಿತ್ರದ ಟ್ರೇಲರ್ ಬಿಡುಗಡೆಯಾದ ಕ್ಷಣದಿಂದಲೇ ಅತಿಹೆಚ್ಚು ವೀಕ್ಷಣೆಯಾಗುತ್ತಿದೆ.
ಆಗಸ್ಟ್ 22 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿರುವ ಈ ಚಿತ್ರದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿದ್ದು ತನ್ನ ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿದೆ. ಅಭಿಮನ್ಯು ಜತೆ ನಾಯಕಿಯಾಗಿ ಅದ್ಯ ಪ್ರಿಯಾ ನಟಿಸಿದ್ದು. ಅನುಪ್ರೇಮ, ಗುರುರಾಜ್ ಹೊಸಕೋಟೆ, ದುಷ್ಯಂತ್, ಶ್ರೀಮಂತ್ ಸುರೇಶ್, ಚಂದ್ರು ಬಂಡೆ ಉಳಿದ ತಾರಾಬಳಗದಲ್ಲಿದ್ದಾರೆ.

“ಹಚ್ಚೆ” ಚಿತ್ರಕ್ಕೆ ಇತಿಹಾಸದ ಶಕ್ತಿ ಎಂಬ ಅಡಿಬರಹವಿದೆ. ಈ ಚಿತ್ರಕ್ಕೆ ಕರ್ನಾಟಕದ ಸುಂದರ ಸ್ಥಳಗಳಲ್ಲಿ 50 ದಿನಗಳ ಚಿತ್ರೀಕರಣ ನಡೆದಿದೆ.
ವಿವೇಕ್ ಚಕ್ರವರ್ತಿ ಅವರ ಸಂಗೀತ ನಿರ್ದೇಶನ, ಸು್್ದರೇಶ್ ಆರ್ಮುಗಂ ಅವರ ಸಂಕಲನ ಹಾಗೂಯಾಸಿನ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ಟೀಸರ್ ಕೂಡ ಅತಿ ಹೆಚ್ಚು ವೀಕ್ಷಣೆಯಾಗಿದೆ.