1
1
ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿರುವ, ರಾಮಪ್ಪ ಸೋಮಪ್ಪ ಮೇಗಲಮನಿ, ಸೋಮಶೇಖರ್ ಜಿ ಪಟ್ಟಣಶೆಟ್ಟಿ ಅವರ ಸಹ ನಿರ್ಮಾಣವಿರುವ ಹಾಗೂ MJ ಅವರು ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ “ದೈವ” ಚಿತ್ರದ ಟೀಸರ್ ಶಿಕ್ಷಕರ ದಿನದಂದು ಬಿಡುಗಡೆಯಾಯಿತು. ನಿರ್ದೇಶಕರಾದ ಗುರು ದೇಶಪಾಂಡೆ, ಹರಿ ಸಂತೋಷ್, ಭರ್ಜರಿ ಚೇತನ್, ಜಡೇಶ್ ಕೆ ಹಂಪಿ ಹಾಗೂ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ ಆರ್ ಕೆ ವಿಶ್ವನಾಥ್ “ದೈವ” ಚಿತ್ರದ ಟೀಸರ್ ನ್ನು ಬಿಡುಗಡೆ ಮಾಡಿದರು. ಎಂ ಟೆಕ್ ಮುಗಿಸಿ ಸಧ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ MJ (ಮಂಜುನಾಥ್ ಜಯರಾಜ್) ಅಭಿನಯದ ಹಾಗೂ ನಿರ್ದೇಶನದ ದೈವ ಚಿತ್ರದ ಟೀಸರ್ ಶಿಕ್ಷಕರ ದಿನದಂದೇ ಬಿಡುಗಡೆಯಾಗಿದ್ದು ವಿಶೇಷವಾಗಿತ್ತು.

ನಿರ್ದೇಶಕ ಹಾಗೂ ನಾಯಕ MJ ( ಮಂಜುನಾಥ್ ಜಯರಾಜ್) ಮಾತನಾಡುತ್ತ ಇದೊಂದು ಪಕ್ಕಾ ದೇಸಿ ಕಥಾಹಂದರ ಹೊಂದಿರುವ ಚಿತ್ರ. “ದೈವ” ಚಿತ್ರದಲ್ಲಿ ಕಾಲಭೈರವನ ಆರಾಧಕನಾಗಿ, ಜೋಗಯ್ಯನ ಪಾತ್ರದಲ್ಲಿ ಎರಡು ಗೆಟಪ್ ಗಳಲ್ಲಿ ನಾನು ಅಭಿನಯಿಸಿದ್ದೇನೆ. “ದೈವ” ಎಂದ ಕೂಡಲೇ ಇದು ಪೌರಾಣಿಕ ಚಿತ್ರವಲ್ಲ. ನೋಡುಗರಿಗೆ ಬೇಕಾದ ಎಲ್ಲಾ ಮನರಂಜನಾತ್ಮಕ ಅಂಶಗಳಿರುವ ಕಮರ್ಷಿಯಲ್ ಸಿನಿಮಾ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು ರೀರೆಕಾರ್ಡಿಂಗ್ ಕಾರ್ಯ ನಡೆಯುತ್ತಿದೆ. ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದ್ದು ನಂತರ ಸೆನ್ಸಾರ್ ಗೆ ಹೋಗಲಿದೆ. ನಮ್ಮ ತಾಯಿ ಜಯಮ್ಮ ಪದ್ಮರಾಜ್ ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸುರಭಿ, ನೀತು ರಾಯ್, ಬಲ ರಾಜ್ವಾಡಿ, ಮಂಜುರಾಜ್ ಸೂರ್ಯ, ಅರುಣ್ ಬಚ್ಚನ್ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಶಿಕ್ಷಕರ ದಿನದಂದು ಸರಸ್ವತಿ ಪುತ್ರರು ಹಾಗೂ ಗುರು ಸಮಾನರಾದ ಕನ್ನಡದ ಐದು ಹಿರಿಯ ನಿರ್ದೇಶಕರು ನಮ್ಮ “ದೈವ” ಚಿತ್ರದ ಟೀಸರ್ ಬಿಡುಗಡೆ ಮಾಡಿ ಕೊಟ್ಟಿದ್ದಾರೆ. ಅವರಿಗೆ ಹಾಗೂ ಚಿತ್ರರಂಗದ ನನ್ನ ಗುರುಗಳಾದ ರವಿ ಶ್ರೀವತ್ಸ ಅವರಿಗೆ ಧನ್ಯವಾದಗಳು ಎಂದರು.
ಪತ್ರಕರ್ತ, ನಟ ಮಂಜುರಾಜ್ ಸೂರ್ಯ (ವಿ.ಸಿ.ಎನ್ ಮಂಜು) ಮಾತನಾಡುತ್ತ ಈ ಚಿತ್ರದಲ್ಲಿ ನಾನು ಎನ್ ಜಿ ಓ ಮೂಲಕ ಹಳ್ಳಿಯ ಮಕ್ಕಳಿಗೆ ಅವರ ವಿಧ್ಯಾಬ್ಯಾಸಕ್ಕೆ ಸಹಾಯ ಮಾಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. “ದೈವ” ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಹೇಳಿದರು.
ನಿರ್ಮಾಪಕಿ ಜಯಮ್ಮ ಪದ್ಮರಾಜ್ ಮಾತಾಡುತ್ತ ನನ್ನ ಮಗ ಈ ಚಿತ್ರದ ಮೂಲಕ ನಾಯಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ. ಎಲ್ಲರೂ ಹಾರೈಸಿ, ನಮ್ಮ ಚಿತ್ರವನ್ನು ಗೆಲ್ಲಿಸಿ ಎಂದರು.
ಚಿತ್ರದ ನಾಯಕಿ ನೀತು ರಾಯ್, ಅರುಣ್ ಬಚ್ಚನ್, ಮೀಸೆ ಮೂರ್ತಿ, ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹಾಗೂ ಛಾಯಾಗ್ರಾಹಕ ಸಿದ್ಧಾರ್ಥ್ ಎಲ್ಲರೂ “ದೈವ” ಚಿತ್ರದ ವಿಶೇಷತೆಗಳ ಕುರಿತಂತೆ ಮಾತನಾಡಿದರು.