1
1
ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಈಗಾಗಲೇ ತನ್ನ ಟ್ರೇಲರ್, ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿರುವ ಚಿತ್ರತಂಡ, ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಡಿಸೆಂಬರ್ 20ರಂದು ಈ ಚಿತ್ರದ ಅದ್ದೂರಿ ಪ್ರೀರಿಲೀಸ್ ಇವೆಂಟ್ ನಡೆಯಲಿದೆ. ಅಂದು ಕಿಚ್ಚ ಸುದೀಪ್, ಸೇರಿದಂತೆ ಚಿತ್ರದ ಬಹುತೇಕ ಕಲಾವಿದರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಮಾರ್ಕ್ ಚಿತ್ರದ ಪ್ರೀರಿಲೀಸ್ ಇವೆಂಟ್ ನಡೆಯಲಿದೆ.

ಮಾರ್ಕ್ ಚಿತ್ರ ಇದೇ ತಿಂಗಳ 25ರಂದು ದೇಶಾದ್ಯಂತ ದೊಡ್ಡಮಟ್ಟದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಆ್ಯಕ್ಷನ್ ಕಟ್ ಹೇಳಿದ್ದಾರೆ. ‘ಮ್ಯಾಕ್ಸ್’ ಚಿತ್ರದ ನಂತರ ಮಾರ್ಕ್ ಚಿತ್ರಕ್ಕಾಗಿ ಕಿಚ್ಚ ಸುದೀಪ್ ಜೊತೆಗೆ ಮತ್ತೊಮ್ಮೆ ವಿಜಯ್ ಕಾರ್ತಿಕೇಯ ಕೈ ಜೋಡಿಸಿದ್ದಾರೆ.
ಸತ್ಯಜ್ಯೋತಿ ಫಿಲಂಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಮೂಲಕ ‘ಮಾರ್ಕ್’ ನಿರ್ಮಾಣವಾಗಿದೆ. ಕಿಚ್ಚ ಸುದೀಪ್ ಜೊತೆ ದೀಪ್ಷಿಕಾ, ನವೀನ್ ಚಂದ್ರ, ರೋಶಿನಿ ಪ್ರಕಾಶ್, ಗುರು ಸೋಮಸುಂದರಂ, ಗೋಪಾಲಕೃಷ್ಣ ದೇಶಪಾಂಡೆ, ಡ್ರ‍್ಯಾಗನ್ ಮಂಜು, ಅರ್ಚನಾ ಕೊಟ್ಟಿಗೆ, ಮಹಾಂತೇಶ್ ಹಿರೇಮಠ್, ಶೈನ್ ಟಾಮ್ ಚಾಕೋ, ಯೋಗಿಬಾಬು ಮುಂತಾದವರು ‘ಮಾರ್ಕ’ ಚಿತ್ರದಲ್ಲಿ ನಟಿಸಿದ್ದಾರೆ.