Popular Posts

CxO conclave inaugurated by Sharanprakash Patil

CXO ಕಾನ್ಕ್ಲೇವ್ : ಬಸಚಿವಶರಣಪ್ರಕಾಶ್ ಪಾಟೀಲ್ ಉದ್ಘಾಟನೆ

ಬೆಂಗಳೂರು,ಮೇ.29- ರಾಜ್ಯದಲ್ಲಿ ಉದ್ಯೋಗ ಸೃಷ್ಠಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಈ ಹಿನ್ನೆಲೆಯಲ್ಲಿ ಕೌಶಲ್ಯ ಅಭಿವೃದ್ದಿ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದು ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ಧಾರೆ.

ಸಿಎಕ್ಸ್ಓ ಕಾಕ್ಲೇವ್ ಹಾಗು ಹಳೆಯ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದ್ಯೋಗ ಪಡೆದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು ಯುವಜನರಿಗೆ ಉದ್ಯೋಗ ಮುಖ್ಯ, ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯುವಕರನ್ನು ಉದ್ಯೋಗಸ್ಥರನ್ನಾಗಿ ಮಾಡಲು ಹಲವು ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ

ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯ ಮೂಲಕ ಗ್ರಾಮೀಣಾಭಿವೃದ್ಧಿ ಮಕ್ಕಳ ಕಡೆಗೆ ಗಮನ ಕೊಟ್ಟಿರುವ ಸರ್ಕಾರ ಆ ಭಾಗದಲ್ಲಿ ಕೈಗಾರಿಕಾ ಪಾಲುದಾರಿಕೆಗಳನ್ನು ಬಲಪಡಿಸಿ ಉದ್ಯೋಗ ಸೃಷ್ಠಿಗೆ ಒತ್ತು ನೀಡಿದೆ. ಯುವಜನತೆಗೆ ಕೌಶಲ್ಯದ ಮೂಲಕ ಜೀವನ ರೂಪಿಸಿಕೊಳ್ಳುವ ಪ್ರಮುಖ ವೇದಿಕೆಯನ್ನು ಸಿಎಕ್ಸ್ ಓ ಸಮಾವೇಶ ಮತ್ತು ಹಳೆಯ ವಿದ್ಯಾರ್ಥಿಗಳ ಸಭೆ ಕಲ್ಪಿಸುತ್ತಿದೆ ಇದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ

ಗ್ರಾಮೀಣ ಭಾಗದ ಯುವಕರನ್ನು ಸಬಲೀಕರಣಗೊಳಿಸಿ ಕೌಶಲ್ಯ ಆಧಾರಿತ ಅವಕಾಶ ನೀಡುವ ಉದ್ದೇಶ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‍ಗಿದೆ. ಯೋಜನೆಯಡಿ ಕೌಶಲ್ಯ ಸಂಬಂಧಿತ ತರಬೇತಿ ನೀಡಿ, ಯುವಕರು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲಾಗುತ್ತಿದೆ. ಜೊತೆಗೆ ರಾಜ್ಯ ಸರ್ಕಾರ ಯುವನಿಧಿ ಮೂಲಕ ನಿರುದ್ಯೋಗಿ ಪದವಿಧರರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ

ರಾಜ್ಯ ಸರ್ಕಾರ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯ ಸಮಾವೇಶ ಮತ್ತು ಹಳೆಯ ವಿದ್ಯಾರ್ಥಿಗಳ ಸಭೆಯನ್ನ ನಡೆಸಿದೆ ಎಂದರು

ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳಾದ ಶ್ರೀವಿದ್ಯಾ, ಅನಿತಾ ಲಕ್ಷ್ಮೀ, ಅಧಿಕಾರಿ ಅರ್ಜುನ್ ಒಡೆಯರ್, ಆರ್. ಆರ್. ಸಿಂಗ್ ಹಾಗೂ ಸತೀಶ್ ಕುಮಾರ್ ಮತ್ತಿತರರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *