1
1
ಯುವ ಚಿತ್ರದ ನಂತರ ಯುವರಾಜ್ ಕುಮಾರ್ ನಟಿಸಿರುವ ಮತ್ತೊಂದು ಬಹುನಿರೀಕ್ಷಿತ ಚಿತ್ರ ಎಕ್ಕ. ಟೀಸರ್ ಹಾಗೂ ಟೈಟಲ್ ಟ್ರ್ಯಾಕ್ ಮೂಲಕ ಭಾರೀ ನಿರೀಕ್ಷೆ ಹುಟ್ಟಿಸಿರುವ ಈ ಚಿತ್ರ ತೆರೆಗೆ ಎಂಟ್ರಿ ಕೊಡಲು ರೆಡಿಯಾಗುತ್ತಿದೆ. ಜುಲೈ 18ಕ್ಕೆ ಎಕ್ಕ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ.
ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲಂಸ್ ಒಟ್ಟಾಗಿ ನಿರ್ಮಾಣ ಮಾಡುತ್ತಿರುವ ಎಕ್ಕ ಸಿನಿಮಾಗೆ ರೋಹಿತ್ ಪದಕಿ ಆಕ್ಷನ್ ಕಟ್ ಹೇಳಿದ್ದಾರೆ. ನಾಯಕ ಯುವರಾಜ್ ಕುಮಾರ್ ಜತೆ ಸಂಜನಾ ಆನಂದ್ ಹಾಗೂ ಸಂಪದಾ ನಾಯಕಿಯರಾಗಿ ಸಾಥ್ ಕೊಟ್ಟಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ಬಹು ದೊಡ್ಡ ತಾರಗಣವೇ ಈ ಚಿತ್ರದಲ್ಲಿದೆ. ‘ರತ್ನನ್ ಪ್ರಪಂಚ’ ಬಳಿಕ ‘ಉತ್ತರಕಾಂಡ’ ಸಿನಿಮಾ ಆರಂಭಿಸಿದ್ದ ರೋಹಿತ್ ಪದಕಿ ಅದನ್ನು ಪಕ್ಕಕ್ಕಿಟ್ಟು ‘ಎಕ್ಕ’ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ.

ರೋಹಿತ್ ಪದಕಿ ನಿರ್ದೇಶನದ ಪಕ್ಕಾ ಕಮರ್ಷಿಯಲ್ ಎಂಟರ್‌ಟೈನರ್ ಸಿನಿಮಾ ‘ಎಕ್ಕ’. ಬಹಳ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ. ಇತ್ತೀಚೆಗೆ ನಟ ಯುವರಾಜ್‌ಕುಮಾರ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಚಿತ್ರದ ಸಣ್ಣ ಟೀಸರ್ ರಿಲೀಸ್ ಆಗಿ ಧೂಳೆಬ್ಬಿಸಿತ್ತು. ಅದಕ್ಕೂ ಮುನ್ನ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಆಗಿತ್ತು.
ಬೆಂಗಳೂರಿನ ಅಂಡರ್‌ವರ್ಲ್ಡ್ ಕುರಿತಾದ ಕಥೆ ಎಕ್ಕ ಚಿತ್ರದಲ್ಲಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರದಕ್ಕು ನಟ ಯುವ ರಾಜ್‌ಕುಮಾರ್ ಸಿಕ್ಕಾಪಟ್ಟೆ ರಡಗ್ ಲುಕ್‌ನಲ್ಲಿ ನಟಿಸಿದ್ದಾರೆ. ‘ಜಾಕಿ’ ಚಿತ್ರದಲ್ಲಿ ‘ಎಕ್ಕ ರಾಜ ರಾಣಿ’ ಎಂಬ ಸಾಂಗ್ ಬಂದು ಹಿಟ್ ಆಗಿದ್ದು ಗೊತ್ತೇಯಿದೆ. ಇನ್ನು ‘ಜಾಕಿ’ ಚಿತ್ರದ ದೃಶ್ಯವೊಂದರಲ್ಲಿ ಅಪ್ಪು ವಿಭಿನ್ನ ಅವತಾರದಲ್ಲಿ ದರ್ಶನ ಕೊಟ್ಟಿದ್ದರು. ‘ಎಕ್ಕ’ ಟೀಸರ್‌ನಲ್ಲಿ ಅಂಥದ್ದೇ ಲುಕ್‌ನಲ್ಲಿ ಯುವ ಕೂಡ ಕಾಣಿಸಿಕೊಂಡಿದ್ದರು.
ರೋಹಿತ್ ಪದಕಿ, ವಿಕ್ರಂ ಹತ್ವಾರ್ ಜೊತೆ ಸೇರಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಚರಣ್ ರಾಜ್ ಅವರ ಸಂಗೀತ, ಸತ್ಯ ಹೆಗಡೆ ಅವರ ಛಾಯಾಗ್ರಹಣ ಮತ್ತು ದೀಪು ಎಸ್ . ಕುಮಾರ್ ಅವರ ಸಂಕಲನ ‘ಎಕ್ಕ’ ಸಿನಿಮಾಗಿದೆ.