Popular Posts

ಚೌಕಿದಾರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಧ್ರುವ ಸರ್ಜಾ

ಪೃಥ್ವಿ ಅಂಬಾರ್-ಧನ್ಯ ರಾಮ್ ಕುಮಾರ್ ನಟನೆಯ ಚೌಕಿದಾರ್ ಜ.30ಕ್ಕೆ ರಿಲೀಸ್

ರಥಾವರ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಅವರ ಸಾರಥ್ಯದ ಚೌಕಿದಾರ್ ಚಿತ್ರ ಈಗಾಗಲೇ ತನ್ನ ಟೀಸರ್, ಹಾಡಿನ ಮೂಲಕ ದೊಡ್ಡ. ಮಟ್ಟದ ಕುತೂಹಲ ಹುಟ್ಟುಹಾಕಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಇದೇ ತಿಂಗಳ 30ರಂದು ಚೌಕಿದಾರ್ ತೆರೆಗೆ ಬರಲಿದೆ.

ಪೃಥ್ವಿ ಅಂಬಾರ್ ಹಾಗೂ ಧನ್ಯ ರಾಮ್ ಕುಮಾರ್ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಹಿರಿಯ ನಟ ಸಾಯಿ ಕುಮಾರ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚೈತ್ರದ ಪ್ರೇಮಾಂಜಲಿ ಖ್ಯಾತಿಯ ಶ್ವೇತಾ, ಸುಧಾರಾಣಿ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಧರ್ಮ, ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

ವಿ. ಎಸ್. ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿ ಕಲ್ಲಹಳ್ಳಿ ಚಂದ್ರಶೇಖರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಅವರ ಛಾಯಾಗ್ರಹಣ,‌ ಸಚಿನ್ ಬಸ್ರೂರ್ ಅವರ ಸಂಗೀತ ನಿರ್ದೇಶನ ಈ ಆಚಿತ್ರಕ್ಕಿದೆ.

ಫ್ಯಾಮಿಲಿ, ಅಪ್ಪ-ಮಗನ ಬಾಂಧವ್ಯದ ಕಥೆ ಹೊಂದಿರುವ ಈ ಚಿತ್ರಕ್ಕೆ ಸೆನ್ಸಾರ್‌ ಮಂಡಳಿ U/A ಸರ್ಟಿಫಿಕೇಟ್‌ ನೀಡಿದೆ.
ಮುರುಳಿ ಮಾಸ್ಟರ್ ಕೊರಿಯೋಗ್ರಫಿ, ಜ್ಞಾನೇಶ್ ಮಾತಾಡ್ ಸಂಕಲನ, ಜೈ ಸುಬ್ರಹ್ಮಣ್ಯ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.

Leave a Reply

Your email address will not be published. Required fields are marked *