Popular Posts

ಜೂನ್ 4 ರಂದು ತೆರೆಮೇಲೆ “ಪೆದ್ದಿ”- ಕಿಶೋರ್ ಫಿಲಂಸ್ ವಿತರಣೆ

ಜೇಮ್ಸ್ ಚಿತ್ರದ ನಿರ್ಮಾಪಕರು ಹಾಗೂ ವಿತರಕರಾದ ಕಿಶೋರ್ ಪತ್ತಿಕೊಂಡ ಅವರು ಬಹುನಿರೀಕ್ಷಿತ ಮೆಗಾ ಪವರ್ ಸ್ಟಾರ್ ರಾಮಚರಣ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯ್ “ಪೆದ್ದಿ” ಚಿತ್ರದ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ.
ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರಕ್ಕೆ ಬೆಂಬಲವಾಗಿ ನಿಂತಿವೆ. ಈ ಹಿಂದೆ ‘ಉಪ್ಪೆನ’ ಸಿನಿಮಾವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಪೆದ್ದಿ ಚಿತ್ರದಲ್ಲಿ ರಾಮ್ ಚರಣ್‌ ಜತೆ ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವಕುಮಾರ್ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ. ಇನ್ನುಳಿದಂತೆ ಜಗಪತಿ ಬಾಬು, ದಿವೇಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರಕ್ಕೆ ಎ. ಆರ್. ರೆಹಮಾನ್ ಅವರ ಸಂಗೀತ ನಿರ್ದೇಶನ, ಆರ್. ರತ್ನವೇಲು ಅವರ ಛಾಯಾಗ್ರಹಣ, ನವೀಲ್ ನೂಲಿ ಅವರ ಸಂಕಲನ‌ವಿದೆ.

ಕಿಶೋರ್ ಫಿಲಂಸ್ ಬ್ಯಾನರ್ ಮೂಲಕ ಪೆದ್ದಿ ಚಿತ್ರ ರಾಜ್ಯಾದ್ಯಂತ ಜೂನ್ 4 ರಂದು ಬೆಡುಗಡೆಯಾಗುತ್ತಿದೆ.

Leave a Reply

Your email address will not be published. Required fields are marked *