Popular Posts

“ಮಹಾನ್” ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ

ನಾಯಕನಾಗಿ ವಿಜಯ ರಾಘವೇಂದ್ರ, ವಿಶೇಷ ಪಾತ್ರದಲ್ಲಿ ಶಿವರಾಜ್ ಕುಮಾರ್

ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಾಣದ, ಪಿ.ಸಿ.ಶೇಖರ್ ನಿರ್ದೇಶನದ “ಮಹಾನ್” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್ ನ್ಯಾಯವಾದಿಯಾಗಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಜಯ್ ರಾಘವೇಂದ್ರ ಈ ಚಿತ್ರದ ನಾಯಕ. ಬಹಳ ವರ್ಷಗಳ ನಂತರ ಶಿವರಾಜಕುಮಾರ್ ಹಾಗೂ ವಿಜಯ ರಾಘವೇಂದ್ರ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರೋದು ವಿಶೇಷ.

“ಮಹಾನ್” ರೈತರ ಬಗ್ಗೆ ಮಾಡಿರೋ ಚಿತ್ರ. ಮನೆಯಲ್ಲಿ ನಾವೇನಾದರೂ ತಪ್ಪು ಮಾಡಿದರೆ, ನಮಗೆ ಬುದ್ದಿ ಹೇಳಲು ತಂದೆ – ತಾಯಿ ಇರುತ್ತಾರೆ. ಅಂತಹುದೇ ಪರಿಸ್ಥಿತಿ ಸಮಾಜದಲ್ಲಿ ನಿರ್ಮಾಣವಾದಾಗ ಅಲ್ಲಿನ ತೊಂದರೆಗಳನ್ನು ತಿದ್ದಲು ಪ್ರಬಲ ವ್ಯಕ್ತಿಯ ಅಗತ್ಯವಿರುತ್ತದೆ. ಅಂತಹ “ಮಹಾನ್” ವ್ಯಕ್ತಿಯ ಪಾತ್ರದಲ್ಲಿ ಡಾ||ಶಿವರಾಜಕುಮಾರ್ ಕಾಣಿಸಿಕೊಂಡಿದ್ದಾರೆ. ಹಿರಿಯ ವಕೀಲರಾಗಿ ಶಿವರಾಜಕುಮಾರ್ ನಟಿಸಲಿದ್ದಾರೆ. ಚಿತ್ರಕಥೆಯಲ್ಲಿ ಈ ಪಾತ್ರ ತುಂಬಾ ಪ್ರಮುಖವಾದದ್ದು. ಶಿವರಾಜ್ ಕುಮಾರ್ ಅವರ ಚಿತ್ರ ನಿರ್ದೇಶಿಸಬೇಕೆಂಬ ಬಹಳ ದಿನಗಳ‌‌ ಆಸೆ ಈಡೇರಿದೆ. ಶಿವಣ್ಣ ತಮ್ಮ ಚಿತ್ರದಲ್ಲಿ ನಟಿಸಿದ್ದು ನಿರ್ಮಾಪಕ ಪ್ರಕಾಶ್ ಬುದ್ದೂರು ಅವರಿಗೂ ಸಂತಸ ನೀಡಿದೆ ಎಂದು ನಿರ್ದೇಶಕ ಪಿ‌.ಸಿ.ಶೇಖರ್ ತಿಳಿಸಿದ್ದಾರೆ.

“ಮಹಾನ್” ಬಹು ತಾರಾಬಳಗದ ಚಿತ್ರವಾಗಿದ್ದು, ಡಾ||ಶಿವರಾಜಕುಮಾರ್, ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಸಹ ಆಭಿನಯಿಸಿದ್ದಾರೆ.

Leave a Reply

Your email address will not be published. Required fields are marked *