1
1ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಅವರ 51ನೇ ಹುಟ್ಟುಹಬ್ಬದ ಕೊಡುಗೆಯಾಗಿ “ಜನ ನಾಯಗನ್” ಚಿತ್ರದ ಮೊದಲ ನೋಟವನ್ನು ಕೆವಿಎನ್ ಪ್ರೊಡಕ್ಷನ್ಸ್ ಬಿಡುಗಡೆ ಮಾಡಿದೆ.
ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಚಾಪನ್ನ ಮೂಡಿಸಿರುವ ಕೆವಿಎನ್ ಪ್ರೊಡಕ್ಷನ್ಸ್ ನ ಮುಖ್ಯಸ್ಥರಾದ ವೆಂಕಟ್. ಕೆ. ನಾರಾಯಣ್ ಅವರು ಭಾರತದ ಎಲ್ಲಾ ಭಾಷೆಗಳಲ್ಲೂ ಚಿತ್ರ ನಿರ್ಮಿಸುವ ಗುರಿ ಇಟ್ಟುಕೊಂಡಿದ್ದಾರೆ. ಅದರಲ್ಲೂ ದಕ್ಷಿಣ ಭಾರತದ ಚಿತ್ರಗಳಿಗೆ ಹೆಚ್ಚು ಗಮನ ನೀಡುತ್ತಿರುವ ಈ ಸಂಸ್ಥೆಯಿಂದ ಅದ್ದೂರಿಯಾಗಿ ಚಿತ್ರಗಳು ಮೂಡಿ ಬರಬೇಕು ಅನ್ನೋದು ಇದರ ಒನ್ ಲೈನ್ ಅಜೆಂಡಾ. ಹಾಗೆಯೇ ಸಿನಿಮಾ ನೋಡುವ ಪ್ರೇಕ್ಷಕರಿಗೆ ಯಾವುದೇ ಮೋಸ ಆಗದಂತೆ ಅದ್ದೂರಿ ಮನರಂಜನಾತ್ಮಕ ಚಿತ್ರಗಳನ್ನು ನೀಡುವ ಆಸೆ ಈ ಸಂಸ್ಥೆಯದು.

ಈಗಾಗಲೇ ಧ್ರುವ ಸರ್ಜಾ, ಪ್ರೇಮ್ ಕಾಂಬಿನೇಶನ್ ನ ಕೆಡಿ ಸೇರಿದಂತೆ ಹಲವು ಕನ್ನಡ, ತೆಲುಗು ಹಾಗೂ ತಮಿಳು ಸಿನಿಮಾಗಳನ್ನ ಕೆವಿಎನ್ ನಿರ್ಮಿಸುತ್ತಿದೆ. ಈಗ ಅದ್ದೂರಿಯಾಗಿ ದಳಪತಿ ವಿಜಯ್ ಅವರ ಕೊನೆಯ ಚಿತ್ರ ‘ಜನ ನಾಯಗನ್’ ಚಿತ್ರವನ್ನು ನಿರ್ಮಿಸುತ್ತಿದೆ. ಕಾಲಿವುಡ್ ಸ್ಟಾರ್ ನಟ ದಳಪತಿ ವಿಜಯ್ ಅವರ 69ನೇ ಚಿತ್ರ ಇದಾಗಿದೆ. ಈಗ ನಟ ವಿಜಯ್ ಸಿನಿಮಾಗಿಂತ ರಾಜಕೀಯದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ತಮ್ಮದೇ ಹೊಸ ಪಕ್ಷ ಸ್ಥಾಪಿಸಿಕೊಂಡು ರಾಜಕೀಯಕ್ಕೆ ಧುಮುಕಿದ್ದಾರೆ. ಹಾಗಾಗಿ ಚಿತ್ರರಂಗಕ್ಕೆ ಗುಡ್ ಬೈ ಹೇಳುವ ಕಾಲ ಸನ್ನಿಹಿತವಾಗಿದೆ. ಅವರ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಮೇಲೆ ಅಭಿಮಾನಿಗಳಲ್ಲಿ ದೊಡ್ಡಮಟ್ಟದ. ನಿರೀಕ್ಷೆಯಿದೆ. ಈ ಚಿತ್ರ 2026 ಜನವರಿ 15ರಂದು ವಿಶೇಷವಾಗಿ ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮದ ದಿನ ಅದ್ದೂರಿಯಾಗಿ ಚಿತ್ರ ತೆರೆ ಮೇಲೆ ಬರಲಿದೆ.
ಕೆವಿಎನ್ ಪ್ರೊಡಕ್ಷನ್ಸ್ ಮೂಲಕ ವೆಂಕಟ್. ಕೆ. ನಾರಾಯಣ ನಿರ್ಮಾಣದ ಈ ಹೈ ಬಜೆಟ್ “ಜನ ನಾಯಗನ್” ಚಿತ್ರಕ್ಕೆ ಅದ್ದೂರಿ ಸೆಟ್ಟಗಳನ್ನ ಹಾಕಲಾಗಿದೆಯಂತೆ. ಈ ಚಿತ್ರ ಹಲವಾರು ವಿಶೇಷತೆಗಳು ಒಳಗೊಂಡಿದ್ದು, ಸಿನಿಮಾ ನೋಡಿ ಹೊರಬರುವ ಪ್ರೇಕ್ಷಕನಿಗೆ ಮತ್ತೊಮ್ಮೆ ಸಿನಿಮಾ ನೋಡಬೇಕು ಎನ್ನುವಷ್ಟರ ಮಟ್ಟಿಗೆ ಕ್ರೇಜ್ ಹುಟ್ಟಿಸುತ್ತದೆ. ದಳಪತಿ ವಿಜಯ್ ನಟನೆಯ 69ನೇ ಚಿತ್ರ ಇದಾಗಿದ್ದು, ದೊಡ್ಡ ಬಜೆಟ್ನಲ್ಲಿ ವೆಂಕಟ್. ಕೆ .ನಾರಾಯಣ ಯಾವುದೇ ಕೊರತೆ ಇಲ್ಲದಂತೆ ಅದ್ದೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. ಈಗ “ಜನ ನಾಯಗನ್” ಚಿತ್ರದ ಫಸ್ಟ್ ಲುಕ್ಕನ್ನು ದಳಪತಿ ವಿಜಯ್ ಹುಟ್ಟುಹಬ್ಬಕ್ಕೆ ಹೊರ ತರುತ್ತಿದ್ದು , ಅಭಿಮಾನಿಗಳಲ್ಲಿ ಸಂಭ್ರಮ ಜೋರಾಗಿದೆ.

“ಜನ ನಾಯಗನ್” ಚಿತ್ರದ ಮೊದಲ ಗ್ಲಿಮ್ಸ್ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು , ನಟ ದಳಪತಿ ವಿಜಯ್ ಅಭಿನಯದ ಲುಕ್ ಭರ್ಜರಿಯಾಗಿ ಸದ್ದು ಮಾಡಲಿದೆ. ಕೆವಿಎನ್ ಸಂಸ್ಥೆ ನಿರ್ಮಾಣದ ಈ ಚಿತ್ರವನ್ನು ಹೆಚ್ . ವಿನೋತ್ ನಿರ್ದೇಶಿಸಿದ್ದಾರೆ. ಅನಿರುದ್ದ್ ರವಿಚಂದರ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು , ಚಿತ್ರ ದಳಪತಿ ವಿಜಯ್ ಅಭಿಮಾನಿಗಳ ಹೃದಯ ಗೆಲ್ಲೋದ್ರಲ್ಲಿ ನೋ ಡೌಟ್ ಎಂದಿದ್ದಾರೆ ನಿರ್ಮಾಪಕ ವೆಂಕಟ್. ಕೆ. ನಾರಾಯಣ. ಭರ್ಜರಿಯಾಗಿ ಈ ಸಿನಿಮಾ ಮೂಲಕ ಸಿನಿ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಕೆವಿಎನ್ ಪ್ರೊಡಕ್ಷನ್ಸ್ ಡಿಸ್ಟ್ರಿಬ್ಯುಷನ್ ನಲ್ಲೂ ಒಳ್ಳೆ ಹೆಸರು ಮಾಡಿದೆ. ಇನ್ನು ನಿರ್ಮಾಣದ ವಿಚಾರಕ್ಕೆ ಬಂದ್ರೆ ಬಿಗ್ ಸ್ಟಾರ್ಗಳ ಬಿಗ್ ಬಜೆಟ್ ಸಿನಿಮಾಗಳ ನಿರ್ಮಾಣದ ಮೂಲಕ ದೇಶಾದ್ಯಂತ ಸದ್ದು ಮಾಡಿದೆ. ಪ್ರತಿ ಹಂತದಲ್ಲೂ ದೊಡ್ಡ ಮಟ್ಟದಲ್ಲೇ ಸದ್ದು ಮಾಡುತ್ತಿರುವ ಕೆವಿಎನ್ ಸಂಸ್ಥೆಯ “ಜನ ನಾಯಗನ್” ಈ ವರ್ಷದ ಮೆಗಾ ಹಿಟ್ ಆಗೋದು ಖಂಡಿತ ಎನ್ನುವುದು ಸಿನಿಪಂಡಿತರ ಲೆಕ್ಕಾಚಾರ.