1
1
*ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ವಿಧಾನಸೌಧ, ಸುವರ್ಣಸೌಧ, ಮೈಸೂರು ಅರಮನೆ!
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ಮೂರು ವರ್ಷಗಳ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿಯ ಕಿತ್ತೂರು ಚೆನ್ನಮ್ಮ ವೃತ್ತಗಳು ಭಾನುವಾರ(ಆ.30) ಸಂಜೆ 6ರಿಂದ ರಾತ್ರಿ 10ರವರೆಗೆ ಗುಲಾಬಿ ಬಣ್ಣ(ಪಿಂಕ್ ಲೈಟ್)ದ ಬೆಳಕಿನಲ್ಲಿ ಕಂಗೊಳಿಸಲಿವೆ.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ 2,000/- ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಆ.30ಕ್ಕೆ ಮೂರು ವರ್ಷಗಳನ್ನು ಪೂರೈಸಲಿದೆ.
ಈ ಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ (PINK) ಬಣ್ಣದ ಬೆಳಕಿನ ಲೈಟ್ ವ್ಯವಸ್ಥೆಯನ್ನು ಈ ಎಲ್ಲಾ ಕಟ್ಟಡಗಳ ಮೇಲೆ ಮಾಡಲಾಗಿದೆ.