1
1
“ವೀರ ಕನ್ನಡಿಗ”, ” ಮ್ಯಾಜಿಕ್ ಅಜ್ಜಿ” ಸೇರಿದಂತೆ ಮೂವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಬಾಲನಟನಾಗಿ ಗುರುತಿಸಿಕೊಂಡಿದ್ದ ನಟ ಕಾರ್ತಿಕ್ ಶರ್ಮ ಅವರು ಸಂಗೀತ ನಿರ್ದೇಶಕನಾಗಿ ನೂರಕ್ಕೂ ಅಧಿಕ ಧಾರಾವಾಹಿ ಹಾಗೂ ಟಿವಿ ಶೋ ಗಳಿಗೂ ಸಂಗೀತ ನೀಡಿದ್ದಾರೆ. ಈಗವರು “ಭಾವಾಂತರ” ಚಿತ್ರದ ಮೂಲಕ ನಿರ್ದೇಶಕನಾಗಿ ಭಡ್ತಿ ಪಡೆದಿದ್ದಾರೆ. ನೈಜ ಘಟನೆ ಆಧರಿಸಿದ ಈ ಚಿತ್ರಕ್ಕೆ ಕಾರ್ತಿಕ್ ಶರ್ಮ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಸಂಗೀತ ನಿರ್ದೇಶನದ ಜೊತೆಗೆ ಪ್ರಮುಖ ಪಾತ್ರದಲ್ಲಿ ಕೂಡ ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಆಡಿಯೋ ಹಕ್ಕನ್ನು ಪ್ರತಿಷ್ಠಿತ ಹೊಂಬಾಳೆ ಮ್ಯೂಸಿಕ್ ಸಂಸ್ಥೆ ಪಡೆದುಕೊಂಡಿದೆ.

ಇದೊಂದು ನೈಜ ಘಟನೆ ಆಧಾರಿತ ಚಿತ್ರ. ನನಗೆ ತಿಳಿದ ಹಾಗೆ ದಕ್ಷಿಣ ಭಾರತದಲ್ಲೇ ಈ ರೀತಿಯ ಕಾನ್ಸೆಪ್ಟ್ ಈವರೆಗೂ ಬಂದಿಲ್ಲ. ಅಂತಹ ಅಪರೂಪದ ಕಥಾಹಂದರ ಹೊಂದಿರುವ ಚಿತ್ರವಿದು. ಟೀಸರ್ ನಿರೀಕ್ಷೆಗೂ ಮೀರಿ ಮೆಚ್ಚುಗೆ ಪಡೆದುಕೊಂಡಿದೆ. ಉಡುಪಿ, ಬೆಂಗಳೂರು ಹಾಗೂ ತಮಿಳುನಾಡಿನಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಚಿತ್ರ ಆದಷ್ಟು ಬೇಗ ತೆರೆಗೆ ಬರಲಿದೆ ಎಂದು ನಿರ್ದೇಶಕ ಕಾರ್ತಿಕ್ ಶರ್ಮ ತಿಳಿಸಿದ್ದಾರೆ.
ನಾಯಕಿಯಾಗಿ ತನ್ವಿ ರಾವ್, ಪ್ರಣವ್ ಶ್ರೀಧರ್, ಶ್ರೀವೈಷ್ಣವ್, ವೇದ ರಾವ್, ಭಾನು ಹಾಗೂ ಇತರರು ತಾರಾಗಣದಲ್ಲಿದ್ದಾರೆ. ಕಿಕ್ ಮೀಡಿಯಾ ಸಂಸ್ಥೆ ನಿರ್ಮಾಣದ ಈ ಚಿತ್ರಕ್ಕೆ ಸಾಗರ್ ಅತ್ದ್ಕರ್ ಅವರ ಛಾಯಾಗ್ರಹಣ ಹಾಗೂ ಆಶೀಷ್ ಹುಲಕುಂದ್ ಅವರ ಸಂಕಲನವಿದೆ.