Popular Posts

ವರಮಹಾಲಕ್ಷ್ಮಿ ಹಬ್ಬದಂದು ತೆರೆಗೆ ಮಹಿಳಾಪ್ರಧಾನ ಚಿತ್ರ ‘ಬ್ರಹ್ಮಕಮಲ’

ಈ ಹಿಂದೆ ತಾರಿಣಿ ಎಂಬ ಮಹಿಳಾಪ್ರಧಾನ ಚಿತ್ರ ನಿರ್ದೇಶಿಸಿದ್ದ ಸಿದ್ದು ಪೂರ್ಣಚಂದ್ರ ಅವರ ನಿರ್ದೇಶನದ ಮತ್ತೊಂದು ವಿಶಿಷ್ಟ ಮಹಿಳಾ ಪ್ರಧಾನ ಕಥಾಹಂದರ ಒಳಗೊಂಡ ಚಿತ್ರ `ಬ್ರಹ್ಮಕಮಲ’. ‌ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೈಲರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನಮ್ಮ ನಡುವಿನ ಕೌಟುಂಬಿಕ ವ್ಯವಸ್ಥೆಯಲ್ಲಿ ನಲುಗುವ ಹೆಣ್ಣೊಬ್ಬಳ ಸೂಕ್ಷ್ಮ ಕಥಾನಕ ಒಳಗೊಂಡ ಚಿತ್ರ ಬ್ರಹ್ಮಕಮಲ.

ಆಗಸ್ಟ್ ೨೧ರ ವರಮಹಾಲಕ್ಷ್ಮಿ ಹಬ್ಬದ ಶುಭ ದಿನದಂದು ಈ ಚಿತ್ರವು ರಾಜ್ಯಾದ್ಯಂತ ತೆರೆಗೆ ಬರಲಿದೆ. ದಾರಿ ಯಾವುದಯ್ಯ ವೈಕುಂಠಕೆ ಎಂಬ ಕಂಟೆಂಟ್ ಚಿತ್ರದ ಮೂಲಕ ಗಮನ ಸೆಳೆದಿದ್ದ ಸಿದ್ದು ಪೂರ್ಣಚಂದ್ರ ಭರವಸೆಯ ನಿರ್ದೇಶಕರಾಗಿ ಹೊರಹೊಮ್ಮಿದ್ದರು. ಇದೀಗ ಅವರ ಮತ್ತೊಂದು ಕನಸು ಬ್ರಹ್ಮ ಕಮಲವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ.

ನಮ್ಮ ಸಮಾಜದಲ್ಲಿ ಹೆಣ್ಣಿಗೆ ಒಂದು ಗೌರವಯುತ ಸ್ಥಾನಮಾನವಿದೆ. ಆದರೆ, ನಮ್ಮ ಕೌಟುಂಬಿಕ ವ್ಯವಸ್ಥೆಯಲ್ಲಿ ಅದೇ ಹೆಣ್ಣು ಅನುಭವಿಸುವ ನೋವಿನ ಕಥೆಗಳೂ ಸಾಕಷ್ಟಿವೆ. ಅಂಥಾದ್ದೊಂದು ಹೆಣ್ಣಿನ ಮನ ಮಿಡಿಯುವ ಕಥೆಯನ್ನು ಸಿದ್ದು ಪೂರ್ಣಚಂದ್ರ ಅವರು ಬ್ರಹ್ಮ ಕಮಲ ಚಿತ್ರದಲ್ಲಿ ದೃಶ್ಯವಾಗಿಸಿದ್ದಾರೆ. ಅದೀಗ ಪ್ರೇಕ್ಷಕರ ಮುಂದೆ ಬರುತ್ತಿದೆ.

ಸಿದ್ದು ಪೂರ್ಣಚಂದ್ರ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಪೂರ್ಣಚಂದ್ರ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿದೆ. ರಾಮನಗರದ ಒಂದು ಹಳ್ಳಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಈ ಚಿತ್ರದ ಕಥೆ ಹೆಣೆದಿದ್ದೇನೆ. ನಟಿ ಅದ್ವಿತಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಋತು ಚೈತ್ರ, ಲೋಕೇಂದ್ರ ಸೂರ್ಯ, ಬಲ ರಾಜ್ವಾಡಿ, ಮಮತಾ ರಾಹುತ್, ಪ್ರಮೀಳಾ ಸುಬ್ರಮಣ್ಯ ಮುಂತಾದವರು ಉಳಿದ ಪಾತ್ರವರ್ಗದಲ್ಲಿದ್ದಾರೆ. ಲೋಕೇಂದ್ರ ಸೂರ್ಯ ಅವರ ಛಾಯಾಗ್ರಹಣ, ಅನಂತ್ ಆರ್ಯನ್ ಅವರ ಸಂಗೀತ ನಿರ್ದೇಶನ, ದೀಪು ಅವರ ಸಂಕಲನ, ನಾಗರತ್ನ ಕೆ.ಹೆಚ್ .ಅವರ ನಿರ್ಮಾಣ ನಿರ್ವಹಣೆ ಬ್ರಹ್ಮಕಮಲ ಚಿತ್ರಕ್ಕಿದೆ. ಪುಟ್ಟರಾಜು ಮತ್ತು ಪ್ರಮೀಳಾ ಸುಬ್ರಮಣ್ಯ ಅವರು ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ.

ಪ್ರತಿಷ್ಠಿತ ಮೆಲ್ಬೋರ್ನ ಫಿಲಂ ಫೆಸ್ಟಿವಲ್ ಸೇರಿದಂತೆ ಫ್ರಾನ್ಸ್ ನ ಈಡಿಪ್ಲೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ, ಸಿಡ್ನಿಯ ವಂಡರ್ ಲ್ಯಾಂಡ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ, ನೇಪಾಳದ ಓಲ್ಡ್ ಮಂಕ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲೂ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ ಮತ್ತು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಕೂಡ ಈ ಚಿತ್ರ ಗಳಿಸಿದೆ.

Leave a Reply

Your email address will not be published. Required fields are marked *