Popular Posts

ಹೇಮಂತ್ ಕುಮಾರ್ ಅಭಿನಯದ “ಆಲ್ಫಾ #MEN LOVE VENGEANCE ಟೀಸರ್ ಬಿಡುಗಡೆ

ಮಾಲೂರಿನ ಹೇಮಂತ್ ಕುಮಾರ್ ಅವರು “ಆಲ್ಫಾ #MEN LOVE VENGEANCE* ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದ್ ಕುಮಾರ್ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಗೀತಾ ಹಾಗೂ ಗುರುದೇವ ಹೊಯ್ಸಳ ಖ್ಯಾತಿಯ ನಿರ್ದೇಶಕ ವಿಜಯ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು. ಲಹರಿ ವೇಲು ಟೀಸರ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ನನಗೆ ಮಾಸ್ತಿ ಅವರ ಮೂಲಕ ನಾಯಕ ಹೇಮಂತ್ ಕುಮಾರ್ ಪರಿಚಯವಾಯಿತು. ಅವರಿಗಿರುವ ಸಿನಿಮಾ ಆಸಕ್ತಿ ನನಗೆ ಇಷ್ಟವಾಯಿತು. ಅವರು ಒಂದೊಳ್ಳೆ ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ, ಆದರೆ ಲವ್ ಜಾನರ್ ಚಿತ್ರ ಬೇಡ ಎಂದು ಹೇಳಿದರು, ಆಗ ನಾನು ಈ ಚಿತ್ರದ ಕಥೆ ಹೇಳಿದೆ. ಅವರಿಗೆ ಇಷ್ಟವಾಯಿತು. ಮಾರ್ಚ್ ನಲ್ಲಿ ಪ್ರಾರಂಭವಾದ ಚಿತ್ರವೀಗ ಮುಕ್ತಾಯ ಹಂತದಲ್ಲಿದೆ. ಫೆಬ್ರವರಿ ವೇಳೆಗೆ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಚಿತ್ರವಾದರೂ ಸೆಂಟಿಮೆಂಟ್ ಸೇರಿದಂತೆ ಎಲ್ಲಾ ಮನರಂಜನಾತ್ಮಕ ಅಂಶಗಳಿವೆ. ಮೂವರು ಅಪ್ಪಂದಿರ ಹಾಗೂ ಮೂರು ಜನ ಮಕ್ಕಳ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದ್ದು, ತಂದೆಯ ತಂಟೆಗೆ ಯಾರಾದರೂ ಬಂದರೆ, ಮಕ್ಕಳ “ಪ್ರತಿಕಾರ” ಹೇಗಿರುತ್ತದೆ ಎಂದು ಈ ಚಿತ್ರದಲ್ಲಿ ಹೇಳಿದ್ದೇವೆ. ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಹೇಮಂತ್ ಕುಮಾರ್, ಅಭಿನಯ, ಅಕ್ಷನ್ ಹೀಗೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡು ಬಂದಿದ್ದರು. ಹಾಗಾಗಿ‌ ಅವರಿಂದ ಕೆಲಸ ತೆಗೆಸುವುದು ಅಷ್ಟು ಕಷ್ಟವಾಗಲಿಲ್ಲ. ಕೇರಳ ಮೂಲದ ಗೋಪಿಕಾ ಸುರೇಶ್ ಹಾಗೂ ಈಗಾಗಲೇ ಕೆಲವು ಚಿತ್ರಗಳಲ್ಲಿ ನಟಿಸಿರುವ ಆಯನಾ ಚಿತ್ರದ ನಾಯಕಿಯರು. “ಬಿಗ್ ಬಾಸ್” ಖ್ಯಾತಿಯ ಕಾರ್ತಿಕ್ ಮಹೇಶ್ ಕೂಡ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅವಿನಾಶ್, ಅಚ್ಯುತಕುಮಾರ್, ಮಾನಸಿ ಸುಧೀರ್, ರಮೇಶ್ ಇಂದಿರಾ, ಬಾಲು ನಾಗೇಂದ್ರ, ವಿನಯ್ ಬಿದ್ದಪ್ಪ, ಮಹಾಂತೇಶ್, ರಾಘು ಶಿವಮೊಗ್ಗ ಹೀಗೆ ಅನುಭವಿ ಕಲಾವಿದರ ಬಳಗವೇ ಈ ಚಿತ್ರದಲ್ಲಿದೆ‌. ಜೆ.ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆಯ ಹಾಡುಗಳು ಹಾಗೂ ಕಾರ್ತಿಕ್ ಅವರ ಛಾಯಾಗ್ರಹಣ ಈ ಚಿತ್ರದ ಹೈಲೆಟ್ ಎನ್ನಬಹುದು ಎಂದು ನಿರ್ದೇಶಕ ವಿಜಯ್ ತಿಳಿಸಿದರು.

ನಾಯಕ ಹೇಮಂತ್ ಕುಮಾರ್ ಮಾತನಾಡುತ್ತ ಮಾಸ್ತಿ ನನಗೆ ನಿರ್ದೇಶಕ ವಿಜಯ್ ರನ್ನು ಪರಿಚಯಿಸಿದರು. ವಿಜಯ್ ಹೇಳಿದ ಕಥೆ ಇಷ್ಟವಾಗಿ, ಚಿತ್ತೀಕರಣ ಆರಂಭಿಸಿದೆವು. ನನಗೆ ನಾಯಕನಾಗಬೇಕೆಂಬುದು ಬಹಳ ದಿನಗಳ ಕನಸು. ಆದರೆ ಪೂರ್ವ ತಯಾರಿ ಇಲ್ಲದೆ ನಟಿಸುವುದು ಬೇಡ ಅಂದುಕೊಂಡು ಎಲ್ಲಾ ರೀತಿಯ ತರಬೇತಿ ಪಡೆದು ಈ ಚಿತ್ರದಲ್ಲಿ ನಟಿಸಿದ್ದೇನೆ. ನನ್ನ ಮೊದಲ ಚಿತ್ರಕ್ಕೆ ಅಷ್ಟೇ ಒಳ್ಳೆಯ ತಂಡ ಸಿಕ್ಕಿದೆ‌. ನನ್ನ ತಂದೆ ಆನಂದ್ ಕುಮಾರ್ ಅವರು ಈ ಚಿತ್ರದ ನಿರ್ಮಾಪಕರು. ಆದರೆ, ನಾನೇ ಪ್ರೊಡಕ್ಷನ್ ನೋಡಿಕೊಂಡಿದ್ದೇನೆ. ನಿರ್ಮಾಣ ನಿರ್ವಾಹಕ‌ ಚಂಪಕಧಾಮ ಬಾಬು ಸಹಕಾರ ನೀಡಿದ್ದಾರೆ. ಎಲ್ಲರ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಇಂದು ಟೀಸರ್ ಬಿಡುಗಡೆಯಾಗಿದ್ದು ಫೆಬ್ರವರಿ ವೇಳೆಗೆ ತೆರೆಗೆ ಬರಲಿದೆ ಎಂದರು.

ನಾನು ಈ ಚಿತ್ರದಲ್ಲಿ ಈವರೆಗೂ ಮಾಡಿರದ ವಿಶೇಷ ಹಾಗೂ ವಿಭಿನ್ನ ಪಾತ್ರ ಮಾಡಿದ್ದೇನೆ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದು ನಟ ಕಾರ್ತಿಕ್ ಮಹೇಶ್ ತಿಳಿಸಿದರು.

ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿರುವುದಾಗಿ ನಾಯಕಿ ಆಯನಾ ಹೇಳಿದರೆ, ನನ್ನದು ನಾಯಕನ ಪ್ರೇಯಸಿಯ ಪಾತ್ರ ಎಂದು ಮತ್ತೊಬ್ಬ ನಾಯಕಿ ಗೋಪಿಕ ಸುರೇಶ್ ಹೇಳಿದರು. ಬಾಲು ನಾಗೇಂದ್ರ, ರಾಘು ಶಿವಮೊಗ್ಗ, ಮಹಾಂತೇಶ್, ವಿನಯ್ ಬಿದ್ದಪ್ಪ ತಂತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಹಾಡುಗಳ ಬಗ್ಗೆ ಅನೂಪ್ ಸೀಳಿನ್, ಸಂಭಾಷಣೆ ಕುರಿತು ಮಾಸ್ತಿ ಮಾಹಿತಿ ನೀಡಿದರು. ಛಾಯಾಗ್ರಾಹಕ ಕಾರ್ತಿಕ್ , ಕಲಾ ನಿರ್ದೇಶಕ ಅಮರ್ ಹಾಗೂ ನಿರ್ಮಾಣ ನಿರ್ವಾಹಕ ಚಂಪಕಧಾಮ ಬಾಬು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *