Popular Posts

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಎಂ ಡಿಕೆಶಿ ಘೋಷಣೆ

ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಮೇಲೆ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಡಿಕೆ ಶಿವಕುಮಾರ್ ನಂತರ ಸುದ್ದಿಗೋಷ್ಠಿ ನಡೆಸಿದರು. ಈವೇಳೆ ರಾಜ್ಯದ ಜನರಿಗೆ ಹಲವು ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಪ್ರಮುಖವಾಗಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಪ್ರಕಟಿಸಿದ್ದಾರೆ.

ಈಗ ಶಾಲಾ ಕಾಲೇಜಿನಲ್ಲಿ ಓದುತ್ತಿರುವ ಎಲ್ಲಾ ಗಂಡು ಮಕ್ಕಳಿಗೂ ಫ್ರೀ ಬಸ್ ಪಾಸ್ ನೀಡಲಾಗುತ್ತದೆ. ಆದರೆ ಅದಕ್ಕವರು ಅರ್ಜಿ ಸಲ್ಲಿಸಬೇಕು ಎಂದವರು ಹೇಳಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಪ್ರಕಟಿಸಿತ್ತು. ಇದೀಗ ಡಿಕೆ ಶಿವಕುರ್ಮಾ
ನೇತೃತ್ವದ ಸರ್ಕಾರ ಗಂಡು ಮಕ್ಕಳಿಗೂ ಉಚಿತ ಪಾಸ್ ನೀಡಲು ಮುಂದಾಗಿದೆ. ಈ ಮೂಲಕ ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ತಮ್ಮ ನಿವಾಸದಿಂದ ಶಾಲಾ ಕಾಲೇಜಿಗೆ ಉಚಿತವಾಗಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸಬಹುದು. ಈ ಘೋಷಣೆ ಹೊರಬೀಳುತ್ತಿದ್ದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಖುಷಿಪಟ್ಟಿದ್ದಾರೆ.

ಶಾಲಾ ಕಾಲೇಜುಗಳ ಶುಲ್ಕಗಳು ದುಬಾರಿಯಾಗಿರುವ ಈಗಿನ ಪರಿಸ್ಥಿತಿಯಲ್ಲಿ ಇದು ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಈ ಕುರಿತು ಪೋಷಕರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ಪ್ರಮುಖವಾಗಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ನೀರಾವರಿ ಸಮಸ್ಯೆ ಹರಿಸಲು ತಜ್ಞರ ಜೊತೆ ಚರ್ಚೆ ಮಾಡುವುದಾಗಿಯೂ ಹೇಳಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ ಕಸದ ಸಮಸ್ಯೆ ತೀವ್ರಗೊಳ್ಳುತ್ತಿದೆ. ಹೀಗಾಗಿ ಈ ಸಂದರ್ಭದಲ್ಲಿ ಸುಮ್ಮನೆ ಮಾತು ಕೊಟ್ಟರೆ ಆಗುವುದಿಲ್ಲ. ಸಮಸ್ಯೆ ಕುರಿತು ಪರಿಶೀಲಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದಾಗಿಯೂ ಹೇಳಿದ್ದಾರೆ.

ಉದ್ಯೋಗ ಅವಕಾಶ ಕಲ್ಪಿಸುವ ಕುರಿತು ಸರ್ಕಾರ ಗಂಭೀರವಾಗಿ ಕೆಲಸ ಮಾಡಲಿದೆ. ಶೇಕಡಾ 42ರಷ್ಟು ಜನ ನಗರದಲ್ಲಿ ವಾಸಿಸುತ್ತಿದ್ದಾರೆ. ಉದ್ಯೋಗಕ್ಕಾಗಿ ಅತೀ ದೊಡ್ಡ ವಲಸೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಒಟ್ಟಾಗಿ ನಿರ್ಣಯ ಮಾಡುತ್ತೇವೆ. ಉದ್ಯೋಗ ಅವಕಾಶ ಕಲ್ವಿಸಿಕೊಡುವುದು, ಉದ್ಯೋಗ ನೇಮಕಾತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸರ್ಕಾರ ಕೆಲಸ ಮಾಡಲಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *