Popular Posts

ಟ್ರೆಂಡಿಂಗ್ ಟಾಪ್ ಆದ ‘AFRO ಟಪಾಂಗ್‌’ ಹಾಡು

ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ’45’ರ ಪ್ರಮೋಷನಲ್ ಹಾಡು ‘AFRO ಟಪಾಂಗ್‌’ ಭಾರತದಲ್ಲಿ ಟ್ರೆಂಡಿಂಗ್ ಟಾಪ್ ಹಾಡು ಎನಿಸಿದೆ. ಸೋಶಿಯಲ್‌ ಮೀಡಿಯಾದಲ್ಲಿ ದಾಖಲೆ ಮಟ್ಟದ ವೀಕ್ಷಣೆಯನ್ನು ‘AFRO ಟಪಾಂಗ್‌’ ಹಾಡು ಪಡೆದಿದೆ. ಇದು ಭಾರತದಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಪಂಚ ಭಾಷೆಗಳಲ್ಲೂ ಟಾಪ್ ಟ್ರೆಂಡಿಂಗ್ ಸಾಂಗ್ ಆಗಿದೆ. ಈ ಹಾಡು ಜಾಗತಿಕವಾಗಿ 28.5 ಮಿಲಿಯನ್ ವೀಕ್ಷಣೆಗಳೊಂದಿಗೆ ಹೊಸ ಮೈಲಿಗಲ್ಲನ್ನು ಸಾಧಿಸಿದೆ.

ರಿಯಲ್ ಸ್ಟಾರ್ ಉಪೇಂದ್ರ, ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ಮತ್ತು ರಾಜ್‌ ಬಿ. ಶೆಟ್ಟಿ ಒಟ್ಟಾಗಿ ನಟಿಸಿರುವ 45 ಚಿತ್ರ ಡಿಸೆಂಬರ್ 25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ವರ್ಷದ ಬಹು ನಿರೀಕ್ಷಿತ 45 ಸಿನಿಮಾದ ಟ್ರೈಲರ್ ಡಿ.15ರಂದು ಬಿಡುಗಡೆಯಾಗಲಿದೆ.
ನಿರ್ಮಾಪಕ ರಮೇಶ್‌ ರೆಡ್ಡಿ ಅವರ 45 ಚಿತ್ರದ ಬಜೆಟ್ ₹100 ಕೋಟಿ ಎಂದು ಅಂದಾಜಿಸಲಾಗಿದೆ. ಹಾಡಿನ ಭರ್ಜರಿ ಯಶಸ್ಸು ಚಿತ್ರದ ಬಿಡುಗಡೆಗೆ ಭದ್ರ ಬುನಾದಿ ಹಾಕಿದೆ. ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ.

‘AFRO ಟಪಾಂಗ್‌’ ಹಾಡು ತನ್ನ ವಿಶಿಷ್ಟ ಮ್ಯೂಸಿಕ್ ಮತ್ತು ಉಗಾಂಡದ ಪ್ರಸಿದ್ಧ ಜಿಟೊ ಕಿಡ್ಸ್ ತಂಡದ ಆಕರ್ಷಕ ಸ್ಟೆಪ್ಸ್‌ಗಳಿಂದ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಜಿಟೊ ಕಿಡ್ಸ್ ತಂಡವು ಭಾರತೀಯ ಚಿತ್ರರಂಗಕ್ಕೆ ಇದೇ ಮೊದಲ ಬಾರಿಗೆ ಎಂಟ್ರಿ ಕೊಟ್ಟಿದೆ. ಚಿತ್ರದ ಈ ಪ್ರಮೋಷನಲ್ ಸಾಂಗ್‌ ಯುಟ್ಯೂಬ್‌ನಲ್ಲಿ 28.5 ಮಿಲಿಯನ್ ವೀಕ್ಷಣೆ ಜೊತೆಗೆ 265 ಸಾವಿರ ಲೈಕ್ಸ್ ಪಡೆಯುವ ಮೂಲಕ ದಾಖಲೆ ಸೃಷ್ಟಿಸಿದೆ.

ಕೇವಲ ಪ್ರಚಾರಕ್ಕಾಗಿ ಬಿಡುಗಡೆ ಮಾಡಿದ ಹಾಡಿಗೆ ಇಷ್ಟೊಂದು ದೊಡ್ಡ ಮಟ್ಟದ ವೀಕ್ಷಣೆ ಮತ್ತು ಎನ್ ಕರೇಜ್ ಮೆಂಟ್‌ ಸಿಕ್ಕಿರುವುದು, ಪ್ಯಾನ್ ಇಂಡಿಯಾದಲ್ಲಿ ’45’ ಚಿತ್ರದ ಕಂಟೆಂಟ್‌ ಮತ್ತು ಅದರ ಮೇಲಿರುವ ನಿರೀಕ್ಷೆ ಎಷ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಯೂಟ್ಯೂಬ್‌ನಲ್ಲಿ ಮಾತ್ರವಲ್ಲದೆ ಇನ್‌ಸ್ಟಾ ಗ್ರಾಂನಲ್ಲೂ ‘AFRO ಟಪಾಂಗ್‌’ ಹಾಡು ವೈರಲ್ ಟ್ರೆಂಡ್ ಆಗಿದೆ. ಹಾಡಿನ ಡ್ಯಾನ್ಸ್‌ ಸ್ಟೆಪ್ಸ್‌ ಮತ್ತು ಆಫ್ರೋ ಬೀಟ್ಸ್ ಜನರನ್ನು ಆಕರ್ಷಿಸಿದ್ದು, ರೀಲ್ಸ್‌ಗಳ ಸೃಷ್ಟಿಗೆ ಪ್ರೇರಣೆ ನೀಡಿದೆ.
45 ಚಿತ್ರಕ್ಕೆ ಹಾಲಿವುಡ್‌ ಪ್ರಾಜೆಕ್ಟ್‌ಗಳಿಗೆ ಕೆಲಸ ಮಾಡಿರುವ ಕೆನಡಾದ ಪ್ರತಿಷ್ಠಿತ ವಿ.ಎಫ್.ಎಕ್ಸ್ ಸಂಸ್ಥೆ “MARZ” ಕೆಲಸ ಮಾಡಿದೆ. ಇದು ಚಿತ್ರದ ತಾಂತ್ರಿಕ ಗುಣಮಟ್ಟದ ಬಗ್ಗೆ ಹೆಚ್ಚಿನ ನಿರೀಕ್ಷೆ ಮೂಡಿಸಿದೆ.

‘AFRO ಟಪಾಂಗ್‌’ ಹಾಡಿನ ಯಶಸ್ಸಿನ ಅಲೆಯಲ್ಲಿ, ಡಿಸೆಂಬರ್ 25ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿರುವ ’45’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಓಪನಿಂಗ್‌ ಪಡೆಯುವ ನಿರೀಕ್ಷೆ ಮೂಡಿಸಿದೆ.

Leave a Reply

Your email address will not be published. Required fields are marked *