Popular Posts

ಶ್ರೀಕೃಷ್ಣ ಜನ್ಮಾಷ್ಟಮಿಯಂದು”ವಿಷ್ಣುವಲ್ಲಭ”ನಿಗೆ ಚಾಲನೆ

ಆರ್. ಆರ್. ಫಿಲಂಸ್ ಲಾಂಛನದಲ್ಲಿ ಯಜಮಾನ ನಿರ್ಮಾಪಕರಾದ ರುಹಿನಾ ರೆಹಮಾನ್ ಅವರು ನಿರ್ಮಿಸುತ್ತಿರುವ, ಚಂದ್ರಶೇಖರ್ ಬಂಡಿಯಪ್ಪ ಅವರು ಆಕ್ಷನ್ ಕಟ್ ಹೇಳುತ್ತಿರುವ “ವಿಷ್ಣುವಲ್ಲಭ” ಚಿತ್ರದ ಮುಹೂರ್ತ ಸಮಾರಂಭ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಸಚಿವ ಜಮೀರ್ ಅಹಮದ್ ಖಾನ್ ಅವರು ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸಿದರೆ, ನಿರ್ಮಾಪಕ ಹಾಗೂ ಫಿಲಂ ಚೇಂಬರ್ ಉಪಾಧ್ಯಕ್ಷ ಕೆ.‌ಮಂಜು ಕ್ಯಾಮೆರಾ ಚಾಲನೆ ಮಾಡಿದರು.

ವಿಷ್ಣುವರ್ಧನ್ ಅಭಿನಯದ “ಯಜಮಾನ”, ಸುದೀಪ್ ಅಭಿನಯದ “ಹುಚ್ಚ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ರೆಹಮಾನ್ ಅವರ ಪುತ್ರಿ ರುಹಿನಾ ರೆಹಮಾನ್ ಈ ಹಿಂದೆ ಗಣೇಶ್ ಅಭಿನಯದ “ಮದುವೆ ಮನೆ” ಚಿತ್ರವನ್ನು ನಿರ್ಮಿಸಿದ್ದರು. ಇದೊಂದು ಪ್ರೇಮ ಕಥಾನಕವಾಗಿದ್ದು, ರುಹಿನಾ ಅವರೇ ಕಥೆ ಬರೆದಿದ್ದು, ಜತೆಗೆ ಕ್ರಿಯೇಟಿವ್ ಹೆಡ್ ಅಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. “ರಥಾವರ” ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕೆ.ಎಸ್ ಚಂದ್ರಶೇಖರ್ ಅವರ ಛಾಯಾಗ್ರಹಣ, ಹಾಗೂ ಶ್ರೀಧರ್ ವಿ ಸಂಭ್ರಮ್ ಅವರ‌ ಸಂಗೀತ ನಿರ್ದೇಶನವಿರುವ “ವಿಷ್ಣುವಲ್ಲಭ” ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ಕೆ.ಎಂ.ಪ್ರಕಾಶ್ ಅವರ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ‌.

ಶಾನ್ ಈ ಚಿತ್ರದ ಮೂಲಕ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ನಟನೆಗೆ ಬೇಕಾದ ಪೂರ್ವ ತಯಾರಿ ಕೂಡ ಮಾಡಿಕೊಂಡಿದ್ದಾರೆ. ಪುಟ್ಟಗೌರಿ ಮದುವೆ ಖ್ಯಾತಿಯ ಸಾನ್ಯ ಅಯ್ಯರ್ ಈ ಚಿತ್ರದ ನಾಯಕಿ. ಕೆ.ಜಿ.ಎಫ್ ಅವಿನಾಶ್, ಸಂಪತ್, ಸಂಗೀತ, ಸ್ವಾತಿ, ಯಶ್ ಶೆಟ್ಟಿ ಮುಂತಾದವರು ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ. ಮುಂದಿನ ವಾರದಿಂದ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ. ಅಲ್ಲದೆ ಶ್ರೀಲಂಕಾದಲ್ಲೂ ಚಿತ್ರೀಕರಣ ನಡೆಸುವ ಯೊಜನೆಯಿದೆ.

Leave a Reply

Your email address will not be published. Required fields are marked *